ಬೆಂಗಳೂರು,ಜೂ.22 (DaijiworldNews/HR): ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ ಲಿಮಿಟೆಡ್(ನೈಸ್) ಕಂಪನಿ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ನೈಸ್ ಸಂಸ್ಥೆಗೆ 2 ಕೋಟಿ ಪರಿಹಾರ ನೀಡಬೇಕು ಎಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ನೈಸ್ ಸಂಸ್ಥೆ ಸಲ್ಲಿಸಿದ್ದ ಮೊಕದ್ದಮೆ ವಿಚಾರಣೆ ನಡೆಸಿದ 15ನೇ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಮಲ್ಲನಗೌಡ ಅವರು, ಈ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು 2011ರ ಜೂನ್ 20ರಂದು ಸುದ್ದಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ನೈಸ್ ಕಂಪನಿ ಸಾರ್ವಜನಿಕ ಹಣ ಲೂಟಿ ಮಾಡುವ ಯೋಜನೆ ಎಂದು ಆರೋಪಿಸಿದ್ದು, ಈ ಹೇಳಿಕೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆಯಾಗಿದೆ. 10 ಕೋಟಿ ಪರಿಹಾರ ನೀಡಬೇಕು ಎಂದು ಕೋರಿ 2012ರಲ್ಲಿ ನೈಸ್ ಸಂಸ್ಥೆ ಮೊಕದ್ದಮೆ ದಾಖಲಿಸಿತ್ತು.