ಬೆಂಗಳೂರು, ಜೂ.22 (DaijiworldNews/HR): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಪೋಷಕರು ಸಿಆರ್ಪಿಸಿ 164 ಅಡಿ ನೀಡಿರುವ ಸ್ವ ಇಚ್ಛಾ ಹೇಳಿಕೆ ರದ್ದು ಪಡಿಸುವಂತೆ ಸಲ್ಲಿಸಿದ್ದಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಇಂದು ಹೈಕೋರ್ಟ್ ನ್ಯಾಯಪೀಠವು ಸಂತ್ರಸ್ತ ಯುವತಿಯ ಪೋಷಕರು ಸಿಆರ್ಪಿಸಿ 164 ಅಡಿಯಲ್ಲಿ ನೀಡಿರುವ ಸ್ವಇಚ್ಛಾ ಹೇಳಿಕೆ ರದ್ದು ಪಡಿಸುವಂತೆ ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿತ್ತು ಎನ್ನಲಾಗಿದೆ.
ಇನ್ನು ಈ ಸಂದರ್ಭದಲ್ಲಿ ಸಂತ್ರಸ್ತೆ ಮನಸ್ಥಿತಿ ಸರಿ ಇರಲಿಲ್ಲ, ಮಾನಸಿಕ ಒತ್ತಡದಲ್ಲಿದ್ದಳು ಎಂದು ಪೋಷಕರ ವಾದವನ್ನು ಪೋಷಕರ ಪರವಾಗಿ ವಕೀಲ ಸಂಕೇತ್ ಏಣಗಿ ಅರ್ಜಿ ಸಲ್ಲಿಸಿದ್ದರು.
ಈ ವಾದವನ್ನು ಆಲಿಸಿದಂತ ನ್ಯಾಯಾಲಯವು ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಎದುರಿಗೆ ನೀಡಿದ್ದ ಸಿಆರ್ಪಿಸಿ ಕಲಂ164 ಅಡಿಯಲ್ಲಿನ ಹೇಳಿಕೆ ನ್ಯಾಯಬದ್ಧವಾಗಿದ್ದು, ಸುಪ್ರೀಂ ಕೋರ್ಟಿನ ನಿರ್ಭಯ ಅತ್ಯಾಚಾರ ಪ್ರಕರಣದ ತೀರ್ಪಿನ ಅನುಸಾರವಾಗಿದೆ ಎಂಬುದಾಗಿ ತಿಳಿಸಿ, ಅರ್ಜಿಯನ್ನು ವಜಾಗೊಳಿಸಿದೆ ಎಂದು ವರದಿಯಾಗಿದೆ.