ನವದೆಹಲಿ, ಜೂ. 22 (DaijiworldNews/SM): ಪ್ರಧಾನಿ ನರೇಂದ್ರ ಮೋದಿ ಜೂನ್ 24ರಂದು ಸರ್ವ ಪಕ್ಷ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು, ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವ ವಿಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಹಿರಿಯ ನಾಯಕರಾದ ಕರಣ್ ಸಿಂಗ್, ಪಿ ಚಿದಂಬರಂ, ಗುಲಾಮ್ ನಬಿ ಆಜಾದ್, ರಜನಿ ಪಾಟೀಲ್, ಜಿಎ ಮಿರ್ ಮತ್ತು ತಾರಿಕ್ ಹಮೀದ್ ಕರ್ರಾ ಸರ್ವ ಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದು ಈ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ.
ಕೇಂದ್ರಾಡಳಿತ ಪ್ರದೇಶದ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಗೆ ಜಮ್ಮು ಮತ್ತು ಕಾಶ್ಮೀರದ ಹದಿನಾಲ್ಕು ನಾಯಕರನ್ನು ಆಹ್ವಾನಿಸಲಾಗಿದೆ. ಅಲ್ಲಿನ ಮುಖಂಡರು ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ.