ನವದೆಹಲಿ, ಜೂ 23 (DaijiworldNews/PY): ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 50,848 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,00,28,709 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,358 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 3,90,660 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸದ್ಯ 6,43,194 ಸಕ್ರಿಯ ಪ್ರಕರಣಗಳಿವೆ. ಚೇತರಿಕೆ ದರ ಶೇ.96.56ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 54,24,374 ಡೋಸ್ ಲಸಿಕೆ ನೀಡಿದ್ದು, ಒಟ್ಟು 29,46,39,511 ಡೋಸ್ ಲಸಿಕೆ ನೀಡಲಾಗಿದೆ.