ಮಡಿಕೇರಿ, ಜೂ 23 (DaijiworldNews/PY): ಮಡಿಕೇರಿ ತಾಲ್ಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ಹಸುವೊಂದನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಘಟನೆಯ ಬಗ್ಗೆ ತಿಳಿದು ಸ್ಥಳಕ್ಕೆ ಧಾವಿಸಿದ 50ಕ್ಕೂ ಅಧಿಕ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಾಲ್ಕು ದಿಕ್ಕುಗಳಿಂದ ಸುತ್ತುವರಿದಿದ್ದಾರೆ. ಈ ಸಂದರ್ಭ ದುಷ್ಕರ್ಮಿಗಳು ಮುಂಚೂಣಿ ತಂಡದ ಕಾರ್ಯಕರ್ತನ ಎದಗೆ ಕೋವಿಯಿಟ್ಟು ಬೆದರಿಸಿದ್ದು, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯ ಪರಿಣಾಮ ಕಗ್ಗೋಡ್ಲು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಮಡಿಕೇರಿ ಗ್ರಾಮಾಂತರ ಪೊಲೀಸರು ಗೋಮಾಂಸ ಹಾಗೂ ಚಾಕುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.
ಪ್ರತಿನಿತ್ಯ ಕೊಡಗಿನಲ್ಲಿ ಗೋಹತ್ಯೆ ನಡೆಯುತ್ತಿದ್ದು, ಪೊಲೀಸ್ ಇಲಾಖೆ ಇದನ್ನು ನಿಯಂತ್ರಿಸುವಲ್ಲಿ ಸಂಪುರ್ಣ ವಿಫಲವಾಗಿದೆ ಎಂದು ಹಿಂದೂ ಜಾಗರಣ ವೇದಿಕೆಯ ಪ್ರಮುಖರು ಕಿಡಿಕಾರಿದ್ದಾರೆ.
ಕಗ್ಗೋಡ್ಲುವಿನಲ್ಲಿ ಕಳೆದ ವಾರ ದುಷ್ಕರ್ಮಿಗಳು ರೈತರ ಗೋವಿಗೆ ಗುಂಡಿಕ್ಕಿ ಹತ್ಯೆಗೈದು ಮಾಂಸ ಮಾಡಿ ಕೊಂಡೊಯ್ದಿದ್ದರು. ಇದೀಗ ಮತ್ತೊಂದು ಪ್ರಕರಣ ವರದಿಯಾಗಿದೆ.