ಬೆಂಗಳೂರು, ಜೂ 23 (DaijiworldNews/PY): "ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಆದ್ಯತೆ ಮೇರೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು" ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಲೇಜು ವಿದ್ಯಾರ್ಥಿಗಳಿಗೆ ಆದ್ತೆಯ ಮೇರೆಗೆ ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ಲಸಿಕೆ ನೀಡಲಾಗುವುದು. ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ಸೋಂಕಿಗೆ ಲಸಿಕೆಗಯೇ ಸಂಜೀವಿನಿ. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ರೂಪಾಂತರವಾಗುತ್ತದೆ. ಈ ಹಿನ್ನೆಲೆ ಲಸಿಕೆಯೇ ಇದಕ್ಕೆ ರಾಮಬಾಣ" ಎಂದಿದ್ದಾರೆ.
"ಜನರು ಹೊಸ ವೈರಸ್ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ. ಇದೆಲ್ಲವನ್ನೂ ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸಲಿದೆ. ಕೊರೊನಾ ಮಾರ್ಗಸೂಚಿಗಳನ್ನು ಜನರು ಕಡ್ಡಾಯವಾಗಿ ಪಾಲಿಸಬೇಕು" ಎಂದು ತಿಳಿಸಿದ್ದಾರೆ.