ಶ್ರೀನಗರ, ಜೂ.24 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶಿರ್ಮಾಲ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, "ಶೋಪಿಯಾನ್ನ ಶಿರ್ಮಲ್ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದೆ" ಎಂದಿದ್ದಾರೆ.
ಇನ್ನು ಪೊಲೀಸ್ ಪಡೆ ಮತ್ತು ಸೇನೆಯು ಉಗ್ರರಿರುವ ಜಾಗವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದಾಗ ಗುಂಡಿನ ಚಕಮಕಿ ನಡೆದಿದ್ದು, ಮೂಲಗಳ ಪ್ರಕಾರ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.