ನವದೆಹಲಿ, ಜೂ 24(DaijiworldNews/PY): ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 54,069 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,00,82,778 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1,321 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ 3,91,981 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 68,885 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 2,90,63,740 ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಇನ್ನು ದೇಶದಲ್ಲಿ ಒಟ್ಟು 6,27,057 ಕೊರೊನಾ ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಒಂದೇ ದಿನ 18,59,469 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಟ್ಟು 39,78,32,667 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
ದೇಶದಲ್ಲಿ ಇಲ್ಲಿಯವರೆಗೆ 30,16,26,028 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.