ಚಿತ್ರದುರ್ಗ, ಜೂ.24 (DaijiworldNews/HR): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು, ರಾಜ್ಯಾದ್ಯಂತ ನಾನು ಎರಡು ಮೂರು ಬಾರಿ ಪ್ರವಾಸ ಮಾಡಿದ್ದೇನೆ. ನಾವು ನಮ್ಮ ಪಕ್ಷದ ಸಂಘಟನೆ, ಸಿಎಂ, ಅಧ್ಯಕ್ಷರು ಹೇಳಿದ ಜವಾಬ್ದಾರಿ ನಿಭಾಯಿಸುತ್ತೇವೆ. ಮುಂದಿನ ಚುನಾವಣೆಯನ್ನು ನಾವೆಲ್ಲಾ ಒಗ್ಗಟ್ಟಾಗಿ ಎದುರಿಸುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.
ಈ ಕುರಿತು ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿ ಕಿತ್ತಾಟದ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ಪಕ್ಷದ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಅದು ಅವರ ಆಂತರಿಕ ವಿಚಾರ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಯಾರು ಬೇಕಾದರೂ ಮುಖ್ಯಮಂತ್ರಿಯಾಗಲಿ. ಅದು ಅವರ ಪಕ್ಷದ ವಿಚಾರ" ಎಂದಿದ್ದಾರೆ.
ಇನ್ನು ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ನಾಯಕರ ಭೇಟಿಯ ಬಗ್ಗೆ ಮಾತನಾಡಿದ ಅವರು, "ರಮೇಶ್ ಜಾರಕಿಹೊಳಿ ಅವರು ನನ್ನ ಆತ್ಮೀಯರು. ಅವರ ದೇವೇಂದ್ರ ಫಡ್ನವೀಸ್ ಭೇಟಿಯ ಬಗ್ಗೆ ಮಾಹಿತಿಯಿಲ್ಲ. ಅವರು ನನಗೆ ಸಂಪರ್ಕಕ್ಕೆ ಸಿಕ್ಕಿಲ್ಲ" ಎಂದರು.