ಬೆಂಗಳೂರು, ಜೂ.24 (DaijiworldNews/HR): ಮುಂದಿನ ಮುಖ್ಯಮಂತ್ರಿ ಕುರಿತು ಇನ್ಮುಂದೆ ಬಹಿರಂಗ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ಶಾಸಕರಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮನವಿ ಮಾಡಿಕೊಂಡಿದ್ದಾರೆ.
ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಶಾಸಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಶಾಸಕರಲ್ಲಿ ಈ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಇನ್ನು ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದ್ದು, ಮುಂದಿನ ಮುಖ್ಯಮಂತ್ರಿ ಎಂದು ಈಗಲೇ ಹೇಳಿಕೆ ನೀಡಬಾರದು. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಚುನಾವಣೆ ಬಳಿಕ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.