ಹಾಸನ, ಜೂ. 24 (DaijiworldNews/SM): ಜೆಡಿಎಸ್ ಪಕ್ಷದಿಂದ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿಯವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮಾಜಿ ಸಚಿವ ಹೆಚ್. ಡಿ. ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಜೆಡಿಎಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಅಥವಾ ಬಿರುಕು ಇಲ್ಲ. ಕುಮಾರಸ್ವಾಮಿಯೇ ನಮ್ಮ ಮುಂದಿನ ಸಿಎಂ ಅಭ್ಯರ್ಥಿ ಎಂದಿದ್ದಾರೆ. ಮುಂಬರುವ 2023ರ ಚುನಾವಣೆಗೆ ಸೂಕ್ತ ರೀತಿಯಲ್ಲಿ ಸ್ಪರ್ಧೆ ನೀಡಲಿದ್ದು, ಸ್ಪಷ್ಟ ಬಹುಮತ ಸಿಕ್ಕಲ್ಲಿ ಜೆಡಿಎಸ್ ಜನಪರ ಆಡಳಿತ ನಡೆಸಲಿದೆ. ಇಲ್ಲವಾದಲ್ಲಿ ಪ್ರತಿಪಕ್ಷ ಸ್ಥಾನದಲ್ಲಿದ್ದುಕೊಂಡು ಜವಾಬ್ದಾರಿ ಮುಂದುವರೆಸಲಿದೆ ಎಂದರು.
ಮುಂಬರುವ ಚುನಾವಣೆಯನ್ನು ಸ್ವತಂತ್ರವಾಗಿ ಎದುರಿಸಲು ಜೆಡಿಎಸ್ ನಿರ್ಧರಿಸಿದೆ ಎಂದು ಹೆಚ್. ಡಿ. ರೇವಣ್ಣ ತಿಳಿಸಿದ್ದಾರೆ. ಇನ್ನು ಪ್ರಸ್ತುತ ರಾಜ್ಯದಲ್ಲಿರುವ ಬಿಜೆಪಿ ಸರಕಾರದ ಕೆಲವು ನೀತಿಗಳನ್ನು ರೇವಣ್ಣ ಟೀಕಿಸಿದ್ದಾರೆ.