ಬೆಂಗಳೂರು, ಜೂ 25 (DaijiworldNews/PY): "ರಾಜ್ಯ ಸರ್ಕಾರ ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಎರಡೂ ಡೋಸ್ ಲಸಿಕೆ ನೀಡಲಿದೆ" ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಲಸಿಕೆ ನೀಡುವುದರಿಂದ ಮಾತ್ರವೇ ಕೊರೊನಾ ಓಡಿಸಲು ಸಾಧ್ಯ. ಎಲ್ಲರಿಗೂ ಡಿಸೆಂಬರ್ ಅಂತ್ಯಕ್ಕೆ ರಾಜ್ಯ ಸರ್ಕಾರ ಕೊರೊನಾ ಲಸಿಕೆ ನೀಡಲಿದೆ" ಎಂದಿದ್ದಾರೆ.
"ಎಲ್ಲಾ ಮಂದಿಗೆ ಡಿಸೆಂಬರ್ ಅಂತ್ಯದಲ್ಲಿ ಎರಡೂ ಡೋಸ್ ಲಸಿಕೆ ನೀಡುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಲಿದೆ. ಲಸಿಕೆಯಿಂದ ಮಾತ್ರವೇ ಕೊರೊನಾ ಸೋಂಕನ್ನು ದೂರ ಮಾಡಲು ಸಾಧ್ಯ. ಎಲ್ಲರೂ ಲಸಿಕೆ ಪಡೆಯುವುದು ಮುಖ್ಯ" ಎಂದು ಹೇಳಿದ್ದಾರೆ.
"ವಿದೇಶದ ಲಸಿಕೆಗಳು ದುಬಾರಿಯಾಗಿವೆ. ಆದರೆ, ಪ್ರಧಾನಿ ಮೋದಿ ಅವರು ನಮ್ಮ ದೇಶದ ಲಸಿಕೆಗಳನ್ನು ಸಂಪೂರ್ಣ ಉಚಿತವಾಗಿ ನೀಡಿದ್ದಾರೆ. ಸ್ವಯಂಪ್ರೇರಿತವಾಗಿ ಎಲ್ಲರೂ ಬಂದು ಲಸಿಕೆ ಹಾಕಿಕೊಳ್ಳಬೇಕು" ಎಂದಿದ್ದಾರೆ.
"ಆರೋಗ್ಯ ಕ್ಷೇತ್ರದಲ್ಲಿ ಸೋಂಕು ನಿಯಂತ್ರಣಕ್ಕೆ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗಿದೆ. ಕಳೆದ 25 ವರ್ಷಗಳಲ್ಲೇ ವೈದ್ಯರ ನೇರ ನೇಮಕಾತಿಯಾಗಿರಲಿಲ್ಲ. ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಿಂದ ಜಿಲ್ಲಾಸ್ಪತ್ರೆಗಳವರೆಗೂ ಖಾಲಿ ಇರುವಂತ 1,760 ವೈದ್ಯ, ವೈದ್ಯಾಧಿಕಾರಿ ಹುದ್ದೆಗಳನ್ನು ತುಂಬಲಾಗಿದೆ" ಎಂದು ತಿಳಿಸಿದ್ದಾರೆ.