ನವದೆಹಲಿ, ಜೂ 25 (DaijiworldNews/PY): ದೇಶದಲ್ಲಿ ಕಳೆದ 24 ಗಂಟೆಯಲ್ಲಿ 51,667 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,01,34,445ಕ್ಕೆ ಏರಿಕೆಯಾಗಿದೆ.
"ಕಳೆದ 24 ಗಂಟೆಗಳಲ್ಲಿ 1,329 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ದೇಶದಲ್ಲಿ 3,93,310 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ" ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
"ಇನ್ನು ದೇಶದಲ್ಲಿ 6,12,868 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 64,527 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇಲ್ಲಿಯವರಗೆ 2,91,28,267 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ" ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
"ಇನ್ನು ಭಾರತದಲ್ಲಿ ಒಂದೇದಿನ 17,35,781 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಒಟ್ಟು 39,95,68,448 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ" ಎಂದು ಐಸಿಎಂಆರ್ ಮಾಹಿತಿ ನೀಡಿದೆ.
"ದೇಶದಲ್ಲಿ ಇಲ್ಲಿಯವರಗೆ 30,79,48,744 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ" ಎಂದು ಕೇಂದ್ರ ಸರ್ಕಾರ ತಿಳಿಸಿದೆ.