ಬೆಂಗಳೂರು, ಜೂ.25 (DaijiworldNews/HR): ಕೊರೊನಾ ಸ್ಥಿತಿಗತಿ, ಕರ್ನಾಟಕ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಬೇಕು ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿರುವ ಅವರು, "ನಾಡಿನ ಕೊರೊನಾ ಸ್ಥಿತಿಗತಿ, ಸರ್ಕಾರದ ಮೇಲಿನ ಭ್ರಷ್ಟಾಚಾರ ಆರೋಪ, ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ ಮತ್ತು ಎಲ್ಲಕ್ಕಿಂತಲೂ ಮುಖ್ಯವಾಗಿ "ಕನ್ನಡ, ಕನ್ನಡಿಗ, ಕರ್ನಾಟಕ"ದ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಿರಿ" ಎಂದು ಆಗ್ರಹಿಸಿದ್ದಾರೆ.
ಇನ್ನು ಕರ್ನಾಟಕದ ಕೊರೊನಾ ಸ್ಥಿತಿಗತಿ, ಈ ಸಂದರ್ಭದಲ್ಲಿ ಸರ್ಕಾರದ ಪ್ಯಾಕೇಜ್ ಜನರಿಗೆ ಹೇಗೆ ತಲುಪುತ್ತಿದೆ ಎಂಬ ಬಗ್ಗೆ ಕೂಡ ಚರ್ಚೆಯಾಗಬೇಕು. ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪ ಕೂಡ ಕೇಳಿಬರುತ್ತಿದ್ದು, ಈ ಬಗ್ಗೆ ತನಿಖೆಯಾಗಬೇಕು" ಎಂದು ಪತ್ರದಲ್ಲಿ ತಿಳಿಸಿದ್ದಾರೆ.