ತಿರುವನಂತಪುರ, ಜೂ.25 (DaijiworldNews/HR): ಸಿನಿಮಾ ನಿರ್ಮಾಪಕಿ ಆಯಿಷಾ ಸುಲ್ತಾನಾ ಅವರಿಗೆ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.
ಆಯಿಷಾ ಸುಲ್ತಾನಾ ಅವರು ಸುದ್ದಿವಾಹಿನಿಯೊಂದರಲ್ಲಿ ಮಾತನಾಡು ವೇಳೆ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಕೆ.ಪಟೇಲ್ ಅವರನ್ನು 'ಜೈವಿಕ ಅಸ್ತ್ರ' ಎಂದು ಕರೆದಿದ್ದರು. ಜತೆಗೆ, ‘ಕೇಂದ್ರ ಸರ್ಕಾರ ಪ್ರಫುಲ್ ಪಟೇಲ್ ಅವರನ್ನು ಲಕ್ಷದ್ವೀಪದ ಜನರ ವಿರುದ್ಧ ಜೈವಿಕ ಅಸ್ತ್ರದಂತೆ ಬಳಸುತ್ತಿದೆ’ ಎಂದು ಅವರು ಆರೋಪಿಸಿದ್ದರು.
ಇನ್ನು ಆಯಿಷಾ ಸುಲ್ತಾನ ಅವರು ಸುಳ್ಳುಸುದ್ದಿ ಹರಡುವ ಮೂಲಕ ಕೇಂದ್ರ ಸರ್ಕಾರದ ಗೌರವಕ್ಕೆ ಅವರು ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅಲ್ಲಿನ ಬಿಜೆಪಿ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್ ಪೊಲೀಸರಿಗೆ ದೂರು ನೀಡಿದ್ದರು.
ಆಯಿಷಾ ಸುಲ್ತಾನ ಅವರ ಹೇಳಿಕೆ ವಿವಾದ ಹುಟ್ಟುಹಾಕಿದ್ದು, ಪೊಲೀಸರು ಆಯಿಷಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದರು.