ಬೆಂಗಳೂರು, ಜೂ.25 (DaijiworldNews/HR): ಕೇವಲ ತನ್ನ ಖುರ್ಚಿ ಉಳಿಸುಕೊಳ್ಳುವುದಕ್ಕಾಗಿ 46 ವರ್ಷಗಳ ಹಿಂದೆ ಇದೇ ದಿನ ಅಂದಿನ ಪ್ರಧಾನಿ ಇಂದಿರಾಗಾಂಧಿ ಯಾವುದೇ ಕಾರಣ ಇಲ್ಲದೇ ತುರ್ತುಸ್ಥಿತಿ ಘೋಷಣೆ ಮಾಡಿದ್ದು, ದೇಶದ ಅನೇಕ ನಾಯಕರು ಜೈಲುವಾಸ ಅನುಭವಿಸಬೇಕಾಯಿತು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ತುರ್ತುಪರಿಸ್ಥಿತಿ ವೇಳೆ ವಾಕ್ ಸ್ವಾತಂತ್ರ್ಯ, ರಾಜಕೀಯ ಸ್ವಾತಂತ್ರ್ಯ ಕಸಿದುಕೊಳ್ಳಲಾಗಿದ್ದು, ತುರ್ತು ಪರಿಸ್ಥಿತಿಯಲ್ಲಿ ಜೈಲು ಸೇರಿದ್ದ ನಟಿ ಸ್ನೇಹಲತಾ ಜೈಲಿನಲ್ಲಿ ಸಾವನ್ನಪ್ಪಿದ್ರು. ನಾನು ಸೇರಿದಂತೆ ಅನೇಕ ಕಾರ್ಯಕರ್ತರು ಜೈಲುವಾಸ ಅನುಭವಿಸಬೇಕಾಯಿತು" ಎಂದರು.
ಇನ್ನು "ವಾಜಪೇಯಿ, ಅಡ್ವಾಣಿ, ಜಾರ್ಜ್ ಫರ್ನಾಂಡೀಸ್, ದೇವೇಗೌಡ ಸೇರಿದಂತೆ ಎಲ್ಲರನ್ನೂ ಬಂಧಿಸಿ ಬೆಂಗಳೂರು ಸೆಂಟ್ರಲ್ ಜೈಲಿನಲ್ಲಿಟ್ಟಿದ್ದು, ಆ ಬಳಿಕ ನಡೆದ ಲೋಕಸಭೆ ಚುನಾವಣೆಯಲ್ಲಿ ಜನ ಅವರನ್ನ ತಿರಸ್ಕರಿಸಿದ್ದು, ಈ ದಿನ ಬಿಜೆಪಿಯಿಂದ ಅಂದು ಬಂಧಿತರಾದವರ ಮನೆಗೆ ಹೋಗಿ ಗೌರವಿಸುವ ಕೆಲಸ ಮಾಡಲಾಗ್ತಿದೆ" ಎಂದಿದ್ದಾರೆ.
ಅಂತಹ ಕರಾಳ ಶಾಸನ ಜನಜೀವನದ ಮೇಲೆ ಬೀರಿದ ದುಷ್ಪರಿಣಾಮ 46 ವರ್ಷಗಳಾದ್ಮೇಲೂ ಕಾಣುತ್ತಿದೆ" ಎಂದು ಹೇಳಿದ್ದಾರೆ