ನವದೆಹಲಿ, ಜೂ 25 (DaijiworldNews/PY): ಯುವ ಕುಸ್ತಿಪಟು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಜುಲೈ 9 ರವರೆಗೆ ವಿಸ್ತರಿಸಿದೆ.
14 ದಿನಗಳ ನ್ಯಾಯಾಂಗ ಬಂಧನ ಕೊನೆಯಲ್ಲಿ ಸುಶೀಲ್ ಕುಮಾರ್ ಅವರನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮಾಯಾಂಕ್ ಅಗರ್ವಾಲ್ ಅವರ ಮುಂದೆ ಹಾಜರು ಪಡಿಸಲಾಯಿತು. ಸುಶೀಲ್ ಕುಮಾರ್ ಅವರು ಕೊಲೆ, ಅಪರಾಧಿ ನರಹತ್ಯೆ ಹಾಗೂ ಅಪಹರಣದ ಆರೋಪ ಎದುರಿಸುತ್ತಿದ್ದಾರೆ.
ಆರೋಪಿಗಳ ಪರ ವಕೀಲರ ಪ್ರಕಾರ, "ಮಾಂಡೋಲಿ ಜೈಲಿನಿಂದ ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಮೊದಲು ಅವರನ್ನು ಅಲ್ಲಿ ದಾಖಲಿಸಲಾಗಿತ್ತು" ಎಂದು ತಿಳಿಸಿದ್ದಾರೆ.
ಮೇ 4 ಮತ್ತು 5 ರ ಮಧ್ಯರಾತ್ರಿ ಕ್ರೀಡಾಂಗಣದಲ್ಲಿ ಆಸ್ತಿ ವಿವಾದದ ಕುರಿತು ಸುಶೀಲ್ ಕುಮಾರ್ ಮತ್ತು ಅವರ ಸಹಚರರೊಂದಿಗೆ ಸಾಗರ್ ಧಂಕರ್ ಹಾಗೂ ಅವರ ಇಬ್ಬರು ಸ್ನೇಹಿತರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯ ಸಂಬಂಧ ಸುಶೀಲ್ ಕುಮಾರ್ ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಬಂಧಿಸಲಾಗಿದೆ.