ಶ್ರೀನಗರ, ಜೂ 25 (DaijiworldNews/PY): ಜಮ್ಮು-ಕಾಶ್ಮೀರದಲ್ಲಿ ಶುಕ್ರವಾರ ನಡೆದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದು, ಉಳಿದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಪ್ರಾತಿನಿಧಕ ಚಿತ್ರ
ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹಂಜಿಪೋರಾದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ತಿಳಿದ ಸೇನಾಪಡೆಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿವೆ. ಈ ಸಂದರ್ಭ ಯೋಧರತ್ತ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರ ದಾಳಿಗೆ ಪ್ರತಿ ದಾಳಿ ನಡೆಸಿದ ಯೋಧರು ಓರ್ವ ಉಗ್ರನನ್ನು ಸದೆಬಡೆದಿದ್ದಾರೆ.
ಸಾವನ್ನಪ್ಪಿದ ಉಗ್ರನ ಗುರುತು ಪತ್ತೆಯಾಗಿಲ್ಲ. ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿದೆ ಎನ್ನಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ. ಘಟನಾ ಪ್ರದೇಶದಲ್ಲಿ ಯೋಧರು ಸುತ್ತುವರೆದಿದ್ದಾರೆ ಎಂದು ಸೇನಾಮೂಲಗಳು ಮಾಹಿತಿ ನೀಡಿವೆ.