ನವದೆಹಲಿ, ಜೂ 26 (DaijiworldNews/PY): "ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಬಹುದು ಹಾಗೂ ಅಗತ್ಯವಾಗಿ ನೀಡಲೇಬೇಕು" ಎಂದು ಆರೋಗ್ಯ ಇಲಾಖೆ ಹೇಳಿದೆ.
ಪ್ರಾತಿನಿಧಿಕ ಚಿತ್ರ
ಗರ್ಭಿಣಿ (ಹಾಗೂ ಮಗು) ಸೋಂಕಿಗೆ ಒಳಗಾಗುವ ಆತಂಕ ವ್ಯಕ್ತವಾಗುತ್ತಿರುವ ಮಧ್ಯೆ ಆರೋಗ್ಯ ಇಲಾಖೆ ಈ ನಿರ್ದೇಶನ ನೀಡಿದೆ.
"ಆರೋಗ್ಯ ಸಚಿವಾಲಯವು ಗರ್ಭಿಣಿಯರಿಗೆ ಲಸಿಕೆ ನೀಡಬಹುದು ಎಂದು ಮಾರ್ಗಸೂಚಿಗಳಲ್ಲಿ ತಿಳಿಸಿದೆ. ಲಸಿಕೆ ಗರ್ಭಿಣಿಯರಿಗೆ ಉಪಯುಕ್ತವಾಗಿದೆ ಹಾಗೂ ಅವರಿಗೆ ಲಸಿಕೆ ನೀಡಲೇಬೇಕು" ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾನಿರ್ದೇಶಕ ಡಾ.ಬಲರಾಮ್ ಭಾರ್ಗವ ಸುದ್ದಿಸಂಸ್ಥೆಯೊಂದಕ್ಕೆ ಮಾಹಿತಿ ನೀಡಿದ್ದಾರೆ.
ಈ ಹಿಂದೆ, ಗರ್ಭಿಣಿ ಹಾಗೂ ಹಾಲುಣಿಸುವ ಮಹಿಳೆಯರಿಗೆ ಲಸಿಕೆ ನೀಡಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿತ್ತು. ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಲಸಿಕೆಯ ಕ್ಲಿನಿಕಲ್ ಟ್ರಯಲ್ನಲ್ಲಿ ಪಾಲ್ಗೊಂಡಿರಲಿಲ್ಲ. ಹಾಗಾಗಿ ಅವರಿಗೆ ಲಸಿಕೆ ನೀಡುವುದು ಬೇಡ ಎಂದು ಹೇಳಲಾಗಿತ್ತು.