ಬೆಂಗಳೂರು, ಜೂ 27 (DaijiworldNews/PY): "ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ" ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
"ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಜೂನ್ 30 ರವರೆಗೂ ಮಳೆಯಾಗುವ ಸಾಧ್ಯತೆ ಇದೆ. ಜೂನ್ 28ರಿಂದ ಎರಡು ದಿನ ದಕ್ಷಿಣ ಕನ್ನಡ ಸೇರಿದಂತೆ ಉಡುಪಿ, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ" ಎಂದು ಹವಾಮಾನ ಇಲಾಖೆ ಹೇಳಿದೆ.
ಜೂನ್ 28 ರವರೆಗೆ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಹಿನ್ನೆಲೆ ಜೂನ್ 27ರಿಂದ 30ರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.