ಬೆಂಗಳೂರು, ಜೂ.27 (DaijiworldNews/HR): ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರುಗಳನ್ನು ಕೇರಳ ಸರ್ಕಾರ ಬದಲಾವಣೆ ಮಾಡಿರುವುದಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, 'ಕೇರಳ ಸರ್ಕಾರದಿಂದ ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರು ಬದಲಾವಣೆ ಮಾಡಿದ್ದು, ಕರ್ನಾಟಕ ಸರ್ಕಾರ ಇದಕ್ಕೆ ತಕ್ಷಣ ತನ್ನ ವಿರೋಧ ವ್ಯಕ್ತಪಡಿಸಬೇಕು ಮತ್ತು ಕೇರಳ ಸಿಎಂ ಜೊತೆ ಮಾತನಾಡಿ ಇಂಥ ಕನ್ನಡ ವಿರೋಧಿ ಕೆಲಸವನ್ನು ತಡೆಯಬೇಕು" ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಇನ್ನು ಮಧೂರ-ಮಧೂರಂ, ಮಲ್ಲ-ಮಲ್ಲಂ, ಕಾರಡ್ಕ-ಕಾಡಗಂ, ಬೇಡಡ್ಕ-ಬೇಡಗಂ, ಕುಂಬಳೆ-ಕುಂಬ್ಲಾ, ಪಿಲಿಕುಂಜೆ-ಪಿಲಿಕುನ್ನು, ಆನೆಬಾಗಿಲು-ಆನವಾದುಕ್ಕಲ್, ಹೊಸದುರ್ಗ-ಪುದಿಯಕೋಟ, ಸಸಿಹಿತ್ಲು-ತೈವಳಪ್ಪು, ಮಹಾಸತಿಗುಂಡಿ-ಮಾಸ್ತಿಕುಂಡು ಎಂದು ಹೆಸರು ಬದಲಾವಣೆ ಆಗಿವೆ.