ಜಮ್ಮು,ಜೂ.27 (DaijiworldNews/HR): ಜಮ್ಮು- ಕಾಶ್ಮೀರದಲ್ಲಿ ಇಂದು ಮುಂಜಾನೆ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದ್ದು, ಓರ್ವ ಉಗ್ರನನ್ನು ಭದ್ರತಾ ಪಡೆ ಬಂಧಿಸಿದೆ ಎಂದು ತಿಳಿದು ಬಂದಿದೆ.
ಜಮ್ಮು-ಕಾಶ್ಮೀರದ ನರ್ವಾಲ್ ಪ್ರದೇಶದಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆ ಬಂಧಿಸಿದ್ದು, 5 ಕೆಜಿ ಐಇಡಿಯನ್ನು ವಶಪಡಿಸಿಕೊಂಡಿದ್ದಾರೆ.
ಇನ್ನು ಬಂಧಿತ ಉಗ್ರನ ವಿಚಾರಣೆ ಮುಂದುವರಿದಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಜಮ್ಮು ವಿಮಾನ ನಿಲ್ದಾಣದ ತಾಂತ್ರಿಕ ಪ್ರದೇಶದ ಒಳಗೆ ಸ್ಫೋಟ ನಡೆದಿದ್ದು, ವಿಧಿವಿಜ್ಞಾನ ತಂಡ ಸ್ಥಳಕ್ಕೆ ಧಾವಿಸಿದೆ.