ಮೈಸೂರು, ಜೂ.27 (DaijiworldNews/HR): "ಇತ್ತೀಚಿನ ದಿನಗಳಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಇತಿಹಾಸದಲ್ಲೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದ ಉದಾಹರಣೆ ಇಲ್ಲ. ಯಾವ ರಾಜ್ಯದಲ್ಲೂ ಕಾಂಗ್ರೆಸ್ ಚುನಾವಣೆಗೂ ಮುಂಚಿತವಾಗಿ ಸಿಎಂ ಅಭ್ಯರ್ಥಿ ಹೆಸರು ಹೇಳಿಲ್ಲ" ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಕೆಲವರು ಅಭಿಮಾನದ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಅಂತ ಕಾಂಗ್ರೆಸ್ ನಲ್ಲಿ ಭಾವಿ ಮುಖ್ಯಮಂತ್ರಿ ಚರ್ಚೆ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರಾಗಬೇಕು ಅನ್ನುವ ಚರ್ಚೆ ಅಪ್ರಸ್ತುತವಾಗಿದ್ದು, ರಾಜ್ಯದಲ್ಲಿ150 ಸ್ಥಾನ ಗೆಲ್ಲೋದು ನಮ್ಮ ಆದ್ಯತೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಿದೆ" ಎಂದಿದ್ದಾರೆ.
ಇನ್ನು ಗುರಿ ಮುಟ್ಟಿದ ಬಳಿಕ ಸಿಎಲ್ಪಿ ಸಭೆ ನಡೆಯಲಿದ್ದು, ಬಳಿಕ ಹೈಕಮಾಂಡ್ ಮುಖ್ಯಮಂತ್ರಿ ಯಾರಾಗಬೇಕೆಂದು ಸೂಚನೆ ಮಾಡ್ತಾರೆ. ಹೀಗಾಗಿ ಯಾರೋ ಮಾತನಾಡಿದ ವಿಚಾರಕ್ಕೆ ಹೆಚ್ಚು ಬೆಲೆ ಕೊಡಬೇಕಿಲ್ಲ ಎಂದು ಹೇಳಿದ್ದಾರೆ.