ಬಳ್ಳಾರಿ, ಜೂ 28 (DaijiworldNews/PY): ಮನೆಯ ಮುಂಭಾಗದಲ್ಲಿದ್ದ ನೀರಿನ ಟ್ಯಾಂಕ್ನಲ್ಲಿ ತನ್ನ ಇಬ್ಬರೂ ಮಕ್ಕಳನ್ನು ಮುಳುಗಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇಂದಿರಾನಗರದ ನಿವಾಸಿ ಸಿದ್ದಪ್ಪ ಪತ್ನಿ ಸುನೀತಾ (25), 2 ವರ್ಷದ ಮಗ ಹಾಗೂ 10 ತಿಂಗಳ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಯ ಬಗ್ಗೆ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.