ನವದೆಹಲಿ, ಜೂ.28 (DaijiworldNews/HR): ಭಾರತದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ 46,148 ಹೊಸ ಕೊರೊನಾ ಪ್ರಕರಣ ವರದಿಯಾಗಿದ್ದು, ಇದೇ ವೇಳೆ 979 ಮಂದಿ ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ 46,148 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ ಪ್ರಸ್ತುತ 30,279,331 ರಷ್ಟಿದೆ ಮತ್ತು ಒಟ್ಟು ಸಾವಿನ ಸಂಖ್ಯೆಯನ್ನು 396,730 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ ಒಟ್ಟು ಪ್ರಕರಣಗಳಲ್ಲಿ 572,994 ಅಥವಾ 1.94% ಗೆ ಕುಸಿದಿದೆ ಮತ್ತು ಇಲ್ಲಿಯವರೆಗೆ 29,309,607 ರೋಗಿಗಳು ಕೊರೊನಾದಿಂದ ಗುಣಮುಖರಾಗಿದ್ದಾರೆ, ಅವರಲ್ಲಿ 58,578 ಜನರನ್ನು ಕಳೆದ 24 ಗಂಟೆಗಳಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 64,25,893 ಜನರಿಗೆ ಕೊರೊನಾ ವಿರುದ್ಧದ ಲಸಿಕೆ ಹಾಕಲಾಗಿದ್ದು, ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 32,36,63,297 ಮಂದಿಗೆ ಲಸಿಕೆ ನೀಡಲಾಗಿದೆ.