ನವದೆಹಲಿ, ಜೂ 28 (DaijiworldNews/PY): ಕೆಂಪು ಕೋಟೆ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ವಿಭಾಗವು ಪಂಜಾಬ್ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನು ಗುರ್ಜೋತ್ ಸಿಂಗ್ ಎಂದು ಗುರುತಿಸಲಾಗಿದೆ.
"ಆರೋಪಿಯನ್ನು ಅಮೃತಸರದಲ್ಲಿ ಬಂಧಿಸಲಾಗಿದೆ. ಇಲಾಖೆಯು ಗುರ್ಜೋತ್ ಸಿಂಗ್ನ ಪತ್ತೆಗಾಗಿ 1 ಲಕ್ಷ ನಗದು ಬಹುಮಾನ ಘೋಷಣೆ ಮಾಡಿತ್ತು" ಎಂದು ಪೊಲೀಸ್ ಉಪ ಆಯುಕ್ತ (ವಿಶೇಷ ವಿಭಾಗ) ಸಂಜೀವ್ ಕುಮಾರ್ ಯಾದವ್ ಹೇಳಿದ್ದಾರೆ.
ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಾವಿರಾರು ಮಂದಿ ರೈತರು ಟ್ಯ್ರಾಕ್ಟರ್ ರ್ಯಾಲಿ ನಡೆಸಿದ್ದರು. ಈ ಸಂದರ್ಭ ರೈತರ ಹಾಗೂ ಪೊಲೀಸರ ಮಧ್ಯೆ ಘರ್ಷಣೆ ನಡೆದಿತ್ತು. ಆಗ ಕೆಲ ಪ್ರತಿಭಟನಾಕಾರರು ಕೆಂಪು ಕೋಟೆ ಮೇಲೆ ಹತ್ತಿ ಧರ್ಮ ಸೂಚಕ ಧ್ವಜ ಹಾರಿಸಿದ್ದರು.