ಬೆಂಗಳೂರು, ಜೂ.28 (DaijiworldNews/HR): ಕೊರೊನಾದಿಂದಾಗಿ ಈ ಬಾರಿ ವಿಶೇಷವಾಗಿ ಪರೀಕ್ಷೆ ನಡೆಸಲಾಗುತ್ತಿದ್ದು, ಜು.19 ಹಾಗೂ ಜು. 22ರಂದು ಎರಡು ದಿನ ಪರೀಕ್ಷೆ ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜು.19ರಂದು ಕೋರ್ ವಿಷಯಗಳ ಪರೀಕ್ಷೆ (ಸಮಾಜ ವಿಜ್ಞಾನ, ಗಣಿತ, ವಿಜ್ಞಾನ) ಜು. 22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದ್ದು, ಮಲ್ಟಿಪಲ್ ಚಾಯ್ಸ್ ಮಾದರಿ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಒಎಂಆರ್ ಶೀಟ್ ನಲ್ಲಿ ಉತ್ತರಿಸಬೇಕು ಎಂದಿದ್ದಾರೆ.
ಇನ್ನು ಪರೀಕ್ಷೆಗಳು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದ್ದು, ಯಾವುದೇ ವಿದ್ಯಾರ್ಥಿಗಳಿಗೆ ಕೊರೊನಾ ಲಕ್ಷಣಗಳಿದ್ದರೆ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಒಂದು ವೇಳೆ ಕೊರೊನಾ ಸೋಂಕಿತ ವಿದ್ಯಾರ್ಥಿ ಪರೀಕ್ಷೆ ಬರೆಯಲೇಬೇಕು ಎಂದು ಆಶಿಸಿದರೆ ಅವರಿಗೆ ಹತ್ತಿರದ ಕೊರೊನಾ ಕೇರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗಿವುದು ಎಂದು ಮಾಹಿತಿ ನೀಡಿದ್ದಾರೆ.