ಬೆಂಗಳೂರು, ಜೂ.28 (DaijiworldNews/HR): ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಮಾಹಿತಿ ನೀಡಿರುವ ಅವರು, "ಜುಲೈ ಎರಡನೇ ವಾರದಲ್ಲಿ ಪ್ರಕತವಾಗುವ ಫಲಿತಾಂಶದಿಂದ ಸಮಾಧಾನ ಇಲ್ಲದೇ ಇದ್ದರೆ, ಅಂಥ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ಪಡೆಯಲು ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು" ಎಂದರು.
"ಸ್ಥಗಿತಗೊಂಡಿದ್ದ 2020–21ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಗೆ ಹೊಸ ಅಧಿಸೂಚನೆ ಜೂನ್ 30 ಪ್ರಕಟವಾಗಲಿದ್ದು, ಅಂದೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ" ಎಂದಿದ್ದಾರೆ.
ಇನ್ನು ಈ ಬಾರಿ ವಲಯ, ಹೆಚ್ಚುವರಿ ವರ್ಗಾವಣೆ ಇರುವುದಿಲ್ಲ. ಈಗಾಗಲೇ 75 ಸಾವಿರ ಅರ್ಜಿ ಸ್ವೀಕಾರ ಆಗಿದ್ದು, ಅವರಿಗೆ ಮೊದಲು ಕೌನ್ಸೆಲಿಂಗ್ ಪ್ರಕಿಯೆ ಆರಂಭವಾಗಲಿದೆ. ಹೊಸತಾಗಿ ಅರ್ಜಿ ಸಲ್ಲಿಸಿದವರಿಗೆ ಎರಡನೇ ಹಂತದಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ" ಎಂದು ಹೇಳಿದ್ದಾರೆ.