ನವದೆಹಲಿ, ಜೂ 30 (DaijiworldNews/PY): ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 45,951 ಹೊಸ ಕೊರೊನಾ ಪ್ರಕರಣ ವರದಿಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,03,62,848ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 817 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಒಟ್ಟು 3,98,454 ಮಂದಿ ಸೋಂಕಿಗೆ ಬಲಿಯಾಗಿದ್ಧಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮಂದಿ ಸೋಂಕಿನಿಂದ 60,729 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 2,94,27,330 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ. 5,37,064 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ರಿಕವರಿ ರೇಟ್ 96.92%ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.