ಶ್ರೀನಗರ, ಜೂ 30 (DaijiworldNews/PY): ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ನಡೆಸಿದ ಎರಡು ಪ್ರತ್ಯೇಕ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.
ಸಾಂದರ್ಭಿಕ ಚಿತ್ರ
ಕಳೆದ ರಾತ್ರಿ ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದ ಮಲ್ಹೂರಾ ಹಾಗೂ ಪರಿಂಪೊರಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ಸದೆಬಡಿದಿದ್ದಾರೆ. ಉಗ್ರ ಬಳಿಯಿದ್ದ ಎರಡು ಎಕೆ 47 ರೈಫಲ್ಸ್ಗಳನ್ನು ಭದ್ರತಾಪಡೆಗಳು ವಶಪಡಿಕೊಂಡಿದ್ದು, ಘಟನಾ ಸ್ಥಳದಲ್ಲಿ ಕಾರ್ಯಾಚರಎ ಮುಂದುವರೆದಿದೆ ಎನ್ನಲಾಗಿದೆ.
ಯೋಧರೋರ್ವರ ಮೇಲೆ ಶಸ್ತ್ರಾಸ್ತ್ರಧಾರಿ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾದ ಘಟನ ರಚೌರಿಯ ದಾದಲ್ ಗ್ರಾಮದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಗುಂಡಿನ ದಾಳಿಯಿಂದ ಗಾಯಗೊಂಡ ಯೋಧನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಘಟನೆಯ ಬಗ್ಗೆ ಸುದ್ದಿ ತಿಳಿದ ಭದ್ರತಾಪಡೆಗಳ ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಯಾಚರಣೆ ಪ್ರಾರಂಭಿಸಿದ್ಧಾರೆ ಎಂದು ವರದಿಗಳು ತಿಳಿಸಿವೆ.