ಬೆಂಗಳೂರು, ಜೂ 30 (DaijiworldNews/PY): "10 ದಿನಗಳಲ್ಲಿ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗುತ್ತದೆ" ಎಂದು ಡಿಸಿಎಂ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಆದ್ಯತೆಯ ಮೇರೆಗೆ ಕೊರೊನಾ ಲಸಿಕೆಯಡಿ ಪ್ರಯೋಜನ ಪಡೆಯಲಿರುವವರ ಪೈಕಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್, ಅರೆವೈದ್ಯಕೀಯ, ವೈದ್ಯಕೀಯ ಡಿಪ್ಲೊಮಾ, ಐಟಿಐ, ಡಿಪ್ಲೊಮಾ, ವೈದ್ಯಕೀಯ, ಪದವಿ, ಮುಖ್ಯಮಂತ್ರಿಗಳ ಕೌಶಲ್ಯ ಅಭಿವೃದ್ದಿ ಯೋಜನೆಯಡಿ ನೋಂದಾಯಿಸಿದ ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಕ್ಯಾಂಪಸ್ಗಳಲ್ಲಿ ಅಧ್ಯಯನ ಮಾಡುವವರು ಇದ್ದಾರೆ" ಎಂದು ತಿಳಿಸಿದ್ದಾರೆ.
"400 ಮೆಟ್ರಿಕ್ ಟನ್ಗೆ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು. ಇದು ಆರೋಗ್ಯ ಇಲಾಖೆಯಡಿ ಬರುವ ಆಸ್ಪತ್ರೆಗಳಲ್ಲಿ 250 ಮೆಟ್ರಿಕ್ ಟನ್ ಹಾಗೂ ಉಳಿದವು ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಿಲ್ಲಾ ಆಯುಕ್ತರು ಮಾಡಿದ ವ್ಯವಸ್ಥೆಗಳನ್ನು ಒಳಗೊಂಡಿದೆ" ಎಂದಿದ್ದಾರೆ.