ನವದೆಹಲಿ, ಜು 01 (DaijiworldNews/MS): ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ48,786 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ1,005 ಕೋವಿಡ್'ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಗುರುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ3,04,11,634ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ3,99,459 ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 5,23,257ಕ್ಕೆ ಕುಸಿತವಾಗಿರುವುದು ಗಮನಾರ್ಹ ಸಂಗತಿಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 61,588 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ2,94,88,918ಕ್ಕೆ ತಲುಪಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 33,57,16,019 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.