ನವದೆಹಲಿ, ಜು 01 (DaijiworldNews/MS): ಎರಡರಿಂದ - 17 ವರ್ಷ ವಯಸ್ಸಿನ ಮಕ್ಕಳ ಮೇಲೆ ಕೋವಿಡ್ -19 ಲಸಿಕೆ ಕೊವೊವಾಕ್ಸ್ನ ಹಂತ 2/3 ಪ್ರಯೋಗವನ್ನು ನಡೆಸಲು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಗೆ ಅನುಮತಿ ನೀಡಬಾರದು ಎಂದು ದೇಶದ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿ ಬುಧವಾರ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಸೋಮವಾರದಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ದೇಶದ 10 ಕಡೆಗಳಲ್ಲಿ 12-17 ಮತ್ತು 2-11 ವಯೋಮಾನದ ತಲಾ 460 ಮಕ್ಕಳಿಗೆ ಕೋವೊವ್ಯಾಕ್ಸ್ ಲಸಿಕೆ ಪ್ರಯೋಗ ನಡೆಸಲು ಅನುಮತಿ ಕೋರಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಕ್ಕೆ ಅರ್ಜಿ ಸಲ್ಲಿಸಿದೆ. ಅರ್ಜಿಯ ಬಗ್ಗೆ ಚರ್ಚಿಸಿದ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್ಕೊ) ನ ಕೋವಿಡ್ -19 ಕುರಿತು ವಿಷಯ ತಜ್ಞರ ಸಮಿತಿ (ಎಸ್ಇಸಿ)ಯಾವುದೇ ದೇಶದಲ್ಲಿ ಕೋವೊವ್ಯಾಕ್ಸ್ ಲಸಿಕೆಗೆ ಅನುಮೋದನೆ ನೀಡಲಾಗಿಲ್ಲ’ ಎಂದು ಅಭಿಪ್ರಾಯಪಟ್ಟಿರುವುದಾಗಿ ಮೂಲವೊಂದು ತಿಳಿಸಿದೆ.
ಮಕ್ಕಳ ಮೇಲೆ ಕ್ಲಿನಿಕಲ್ ಪ್ರಯೋಗದ ನಡೆಸುವುದನ್ನು ಪರಿಗಣಿಸಲು ಪುಣೆ ಮೂಲದ ಕಂಪನಿಯು ವಯಸ್ಕರಲ್ಲಿ ನಡೆಸುತ್ತಿರುವ ಕೊವೊವಾಕ್ಸ್ ಲಸಿಕೆಯ ಕ್ಲಿನಿಕಲ್ ಪ್ರಯೋಗದಿಂದ ಸುರಕ್ಷತೆ ಮತ್ತು ಇಮ್ಯುನೊಜೆನೆಸಿಟಿ ಡೇಟಾವನ್ನು (ಕೊವೊವಾಕ್ಸ್) ಸಲ್ಲಿಸಬೇಕು ಎಂದು ಶಿಫಾರಸು ಮಾಡಿದೆ" ಎಂದು ಮೂಲಗಳು ತಿಳಿಸಿವೆ. ಈ ಸಮಿತಿಯ ಶಿಫಾರಸುಗಳನ್ನು ಡಿಸಿಜಿಐ ಅನುಮೋದಿಸಿದೆ ಎಂದು ತಿಳಿದುಬಂದಿದೆ
ಆಗಸ್ಟ್ 2020 ರಲ್ಲಿ, ಯುಎಸ್ ಮೂಲದ ಲಸಿಕೆ ತಯಾರಕ ನೊವಾವಾಕ್ಸ್ ಐಎನ್ಸಿಯು, ಕಡಿಮೆ ಮತ್ತು ಮಧ್ಯಮ-ಆದಾಯದ ದೇಶಗಳಲ್ಲಿ ಮತ್ತು ಭಾರತದಲ್ಲಿ ಅದರ ಕೋವಿಡ್ -19 ಲಸಿಕೆ ಎನ್ವಿಎಕ್ಸ್-ಕೋವಿ 2373 ರ ಅಭಿವೃದ್ಧಿ ಮತ್ತು ವಾಣಿಜ್ಯೀಕರಣಕ್ಕಾಗಿ ಎಸ್ಐಐನೊಂದಿಗೆ ಪರವಾನಗಿ ಒಪ್ಪಂದವನ್ನು ಘೋಷಿಸಿತ್ತು.
ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಅಸ್ಟ್ರಾಜೆನೆಕಾ ಸಹಯೋಗದೊಂದಿಗೆ ಜನವರಿಯಲ್ಲಿ, ಎಸ್ಐಐ ದೇಶದಲ್ಲಿ ಕೋವಿಶೀಲ್ಡ್ ಲಸಿಕೆಯನ್ನು ಹೊರತಂದಿತ್ತು.