ನವದೆಹಲಿ, ಜು. 01(DaijiworldNews/HR): ಈಗಾಗಲೇ ಪೆಟ್ರೋಲ್-ಡೀಸೆಲ್ ಬೆಲೆ ಈಗಾಗಲೇ 100 ರೂ.ದಾಟಿದ್ದು, ಜುಲೈ 1 ರಿಂದ ಜಾರಿಗೆ ಬರುವಂತೆ ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಬೆಲೆಯನ್ನು ರೂ. 25.50 ಹೆಚ್ಚಿಸಲಾಗಿದೆ ಎಂದು ತಿಳಿದು ಬಂದಿದೆ.
ದೆಹಲಿ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಸಬ್ಸಿಡಿ ರಹಿತ ಎಲ್ಪಿಜಿಯ ಬೆಲೆ ಪ್ರತಿ ಸಿಲಿಂಡರ್ಗೆ ರೂ. 834.50 ಆಗಿರುತ್ತದೆ. (14.2 ಕಿಲೋಗ್ರಾಂ) ಎಂದು ಭಾರತೀಯ ತೈಲ ನಿಗಮ ತಿಳಿಸಿದೆ.
ಇನ್ನು ಎಲ್ಪಿಜಿ ಸಿಲಿಂಡರ್ನ ಬೆಲೆ ಚೆನ್ನೈನಲ್ಲಿ ಅತಿ ಹೆಚ್ಚು ರೂ.850.50 ಆಗಿದ್ದು, ಕಳೆದ ಆರು ತಿಂಗಳಲ್ಲಿ 14.2 ಕೆಜಿ ಎಲ್ಪಿಜಿ ಸಿಲಿಂಡರ್ಗೆ ರೂ. 140 ರಷ್ಟು ಏರಿಕೆಯಾಗಿದೆ ಎನ್ನಲಾಗಿದೆ.
ಕಮರ್ಷಿಯಲ್ ಸಿಲಿಂಡರ್ ಬೆಲೆಯನ್ನೂ ತೈಲ ಮಾರುಕಟ್ಟೆ ಕಂಪನಿಗಳು ಹೆಚ್ಚಳ ಮಾಡಿದ್ದು, ಪ್ರತಿ ಸಿಲಿಂಡರ್ಗೆ 84 ರೂ. ಏರಿಸಿವೆ.