ಜಮ್ಮು, ಜು 02 (DaijiworldNews/PY): ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಹಂಜಿನ್ ರಾಜ್ ಪೊರಾ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆಗಳ ಹಾಗೂ ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಹೇಳಿದ್ದಾರೆ.
ಪ್ರಾತಿನಿಧಿಕ ಚಿತ್ರ
ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ತಿಳಿದ ಪೊಲೀಸರು ಪ್ರದೇಶವನ್ನು ಸುತ್ತುವರಿದಿದ್ದು, ಶೋಧಕಾರ್ಯ ನಡೆಸಲು ಪ್ರಾರಂಭಿಸಿದ್ದಾರೆ. ಈ ಸಂದರ್ಭ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ.
ಪೊಲೀಸರಿಗೆ ಉಗ್ರರ ಇರುವಿಕೆಯ ಬಗ್ಗೆ ಮಾಹಿತಿ ತಿಳಿದಂತೆ ಶರಣಾಗವಂತೆ ಉಗ್ರರನ್ನು ಕೇಳಿಕೊಂಡರೂ ಒಪ್ಪದೇ ದಾಳಿ ನಡೆಸಿದ ವೇಳೆ ಎನ್ಕೌಂಟರ್ ನಡೆದಿದ್ದು, ನಾಲ್ವರು ಉಗ್ರರು ಸಿಕ್ಕಿಹಾಕಿಕೊಂಡಿದ್ದಾರೆ.
ಎನ್ಕೌಂಟರ್ ಮುಂದುವರಿದಿದೆ.