ನವದೆಹಲಿ, ಜು 02 (DaijiworldNews/PY): ದೇಶದಲ್ಲಿ ಕಳೆದ 24 ಗಂಟೆಯಲ್ಲಿ 46,617 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,04,58,251ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 853 ಮಂದಿ ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಈವರೆಗೆ 4,00,312 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ದೇಶದಲ್ಲಿ ಕಳೆದ 24 ಗಂಟೆಯಲ್ಲಿ 59,384 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 2,95,48,302 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಸದ್ಯ 5,09,637 ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಗುರುವಾರ 18,80,026 ಮಂದಿಯ ಸ್ಯಾಂಪಲ್ ಪರೀಕ್ಷೆ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 41,42,51,520 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ದೇಶದಲ್ಲಿ ಈವರೆಗೆ 34,00,76,232 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.