ಲಖನೌ, ಜು.05 (DaijiworldNews/HR): ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ (89) ಅವರು ಚಿಕಿತ್ಸೆಗಾಗಿ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಹೃದ್ರೋಗ, ಮೂತ್ರಪಿಂಡ ಶಾಸ್ತ್ರ, ನರವಿಜ್ಞಾನ ಸೇರಿದಂತೆ ಬೇರೆ ಬೇರೆ ವಿಭಾಗಗಳ ತಜ್ಞರನ್ನು ಒಳಗೊಂಡ ಸಮಿತಿ ರಚಿಸಲಾಗಿದ್ದು, ತಜ್ಞ ವೈದ್ಯರು ಕಲ್ಯಾಣ್ ಸಿಂಗ್ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ಕಲ್ಯಾಣ್ ಸಿಂಗ್ ಅವರು ಕಳೆದ ಎರಡು ವಾರಗಳಿಂದ ಅನಾರೋಗ್ಯ ಪೀಡಿತರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಸಂಜೆ 5:30ರ ಸುಮಾರಿಗೆ ಅವರು ಸಂಜಯ್ ಗಾಂಧಿ ಇನ್ಸ್ಟಿಟ್ಯೂಟ್ನ ಐಸಿಯುಗೆ ದಾಖಲಾಗಿದ್ದು, ಅವರಿಗೆ ರಕ್ತದೊತ್ತಡ ಮತ್ತು ಹೃದಯ ಬಡಿತ ಸಹಜವಾಗಿದೆ, ಆದರೆ ಪ್ರಜ್ಞೆ ಕ್ಷೀಣಿಸಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ ಎನ್ನಲಾಗಿದೆ.
ಕಲ್ಯಾಣ್ ಸಿಂಗ್ ಅವರು 1992ರಲ್ಲಿ ಕರಸೇವಕರು ಬಾಬರಿ ಮಸೀದಿ ನೆಲಸಮಗೊಳಿಸಿದ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿದ್ದರು.