ನವದೆಹಲಿ, ಜು.05 (DaijiworldNews/HR): ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 39,796 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,05,85,229ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 723 ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಇದುವರೆಗೂ ಸೋಂಕಿಗೆ ಬಲಿಯಾದವರ ಸಂಖ್ಯೆ 4,02,728ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 4,82,071 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 2,97,00,430 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಕಳೆದ 24 ಗಂಟೆಯಲ್ಲಿ 42,352 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ಭಾನುವಾರ 15,22,504 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು ದೇಶದಲ್ಲಿ ಈವರೆಗೆ 41,97,77,457 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ.
ಇನ್ನು ಭಾರತದಲ್ಲಿ ಈವರೆಗೆ ಒಟ್ಟು 35,28,92,046 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.