ಬೆಂಗಳೂರು, ಜು.05 (DaijiworldNews/HR): ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೇಂದ್ರದ ಬಳಿ ಮಾತನಾಡುವುದೇ ಇಲ್ಲಾ. ಹಮಾರಾ ಕುತ್ತಾ ಹಮಾರಾ ಗಲ್ಲಿ ಮೇ ಶೇರ್ ಅಂತಾರಲ್ಲ ಹಾಗೇ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಜೆಪಿ ಪಕ್ಷಕ್ಕೆ ವೋಟ್ ಹಾಕಲೇ ಬೇಡಿ. ಬಿಜೆಪಿಗೆ ಏಕೆ ವೋಟ್ ಹಾಕ್ತೀರಾ? ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಕೂಡ ರಾಜ್ಯಕ್ಕೆ ದ್ರೋಹ ಮಾಡಿದ್ದಾರೆ. ನಾನು ಸಿಎಂ ಆಗಿದ್ರೆ ನಿರ್ಮಲಾ ಸೀತಾರಾಮನ್ ಮನೆ ಮುಂದೆ ಪ್ರತಿಭಟನೆ ಮಾಡುತ್ತಿದೆ" ಎಂದಿದ್ದಾರೆ.
ಇನ್ನು ಕೊರೊನಾದಂತಹ ಸಂದರ್ಭದಲ್ಲಿ ಜನರ ಕಷ್ಟ ಬಗೆಹರಿಸುವ ಕೆಲಸ ಮಾಡಬೇಕಿತ್ತು. ಪ್ರತಿಯೊಬ್ಬರಿಗೂ 10 ಸಾವಿರ ರೂ. ಕೊಡಿ ಎಂದು ಒತ್ತಾಯ ಮಾಡಿದ್ದೀವಿ. ನಾವು ಇದ್ದಿದ್ದರೆ 10 ಸಾವಿರ ರೂ. ಕೊಡುತ್ತಿದ್ದೆವು. 10 ಕೆಜಿ ಅಕ್ಕಿ ಕೊಡುತ್ತಿದ್ದೇವು. ಈಗ ಇವರು 2 ಕೆಜಿ ಅಕ್ಕಿ ಕೊಡುತ್ತಿದ್ದಾರೆ" ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.