ಬೆಂಗಳೂರು, ಜು.05 (DaijiworldNews/HR): ಜನರು ಕೊರೊನಾದ ಸೂಕ್ತ ನಡವಳಿಕೆಯನ್ನು ಅನುಸರಿಸದಿದ್ದರೆ ಮತ್ತೊಂದು ಲಾಕ್ಡೌನ್ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಆಟೋ ರಿಕ್ಶಾ ಚಾಲಕ ಮತ್ತು ನಿರ್ಮಾಣ ಕಾರ್ಮಿಕರಿಗೆ ಕಿರಾಣಿ ಕಿಟ್ಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಕೊರೊನಾ ಪ್ರಕರಣಗಳು ಕಡಿಮೆಯಾಗಬಹುದು ಆದರೆ ಅದು ಅಜ್ಞಾನಕ್ಕೆ ಕಾರಣವಾಗಬಾರದು. ಸಾರ್ವಜನಿಕರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಮತ್ತು ಲಸಿಕೆಯನ್ನು ಪಡೆಯಬೇಕು. ಇಲ್ಲದಿದ್ದರೆ, ಕರ್ನಾಟಕದಲ್ಲಿ ಲಾಕ್ಡೌನ್ ಅನಿವಾರ್ಯವಾಗಲಿದೆ" ಎಂದಿದ್ದಾರೆ.
ಇನ್ನು ಸದ್ಯಕ್ಕೆ ಕರ್ನಾಟಕದಲ್ಲಿ ಕೊರೊನಾ ಪ್ರಕರಣಳು ಕಡಿಮೆಯಾಗುತ್ತಿದೆ, ಆದರೆ ಮತ್ತೆ ಕೊರೊನಾ ಸಂಖ್ಯೆ ಹೆಚ್ಚಾದರೆ ಲಾಕ್ಡೌನ್ ಖಂಡಿತಾ" ಎಂದು ಹೇಳಿದ್ದಾರೆ.