ಬೆಂಗಳೂರು, ಜು 06 (DaijiworldNews/MS): ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಮಾಧ್ಯಮ ಸಲಹೆಗಾರರಾಗಿದ್ದ ಕೆ.ಸಿ. ಸದಾನಂದ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸದಾನಂದ ಕೆ.ಸಿ ಅವರಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ಸದಾನಂದ ಮೃತಪಟ್ಟಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಸಿಎಂ ಆಗಿದ್ದಾಗ ಹಿರಿಯ ಪತ್ರಕರ್ತ ಸದಾನಂದ ಕೆ.ಸಿ. ಸದಾನಂದ ಅವರನ್ನು ಮಾಧ್ಯಮ ಸಮನ್ವಯ ಅಧಿಕಾರಿಯನ್ನಾಗಿ ನೇಮಿಸಿದ್ದರು. 2018 ರ ಮೇ. 25 ರಿಂದ ಪೂರ್ವನ್ವಯವಾಗುವಂತೆ ಕೆ.ಸಿ. ಸದಾನಂದ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಮನ್ವಯ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿತ್ತು.
ಬೆಂಗಳೂರು ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಸಹ ಕಾರ್ಯ ನಿರ್ವಹಿಸಿದ್ದರು.
ಸೋಶಿಯಲ್ ಮೀಡಿಯಾದಲ್ಲಿ ಸದಾ ಕ್ರಿಯಾಶೀಲವಾಗಿದ್ದ ಚನ್ನಪಟ್ಟಣದ ಸದಾನಂದ, ಸಂಜೆವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು. ಮೃತರು ಪತ್ನಿ, ಪುತ್ರ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.