ಬೆಂಗಳೂರು, ಜು.06(DaijiworldNews/HR): ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ""ಯಾರಿಂದಲೂ ಮೇಕೆದಾಟು ಯೋಜನೆಯನ್ನು ತಡೆಯಲು ಸಾಧ್ಯವಿಲ್ಲ. ಕಾನೂನು ಚೌಕಟ್ಟಿನಲ್ಲಿಯೇ ಈ ಯೋಜನೆಯನ್ನು ಜಾರಿಗೆ ತರುತ್ತೇವೆ ಮತ್ತು ಪೂರ್ಣ ಮಾಡುತ್ತೇವೆ" ಎಂದಿದ್ದಾರೆ.
ಇನ್ನು ಮೇಕೆದಾಟು ಯೋಜನೆಯಿಂದ ಕರ್ನಾಟಕ ಹಾಗೂ ತಮಿಳುನಾಡು ಅನುಕೂಲವಾಗುತ್ತದೆ. ಹೀಗಾಗಿ ಸೌಹಾರ್ದಯುತವಾಗಿ ಮಾಡೋಣ ಎಂದು ನಾನು ತಮಿಳುನಾಡು ಮುಖ್ಯಮಂತ್ರಿ ಬಳಿ ವಿನಂತಿ ಮಾಡಿದ್ದೆ. ಆದರೆ, ಅವರು ಸರಿಯಾಗಿ ಸ್ಪಂದಿಸಲಿಲ್ಲ. ಆದರೂ ನಾವು ಮೇಕೆದಾಟು ಯೋಜನೆಯನ್ನು ಜಾರಿ ಮಾಡುತ್ತೇವೆ. ಆ ವಿಷಯದಲ್ಲಿ ರಾಜ್ಯದ ಜನತೆಗೆ ಯಾವುದೇ ಅನುಮಾನ ಬೇಡ" ಎಂದು ಹೇಳಿದ್ದಾರೆ.