ನವದೆಹಲಿ, ಜು 07 (DaijiworldNews/PY): ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 43,733 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 3,06,63,665 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 930 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ 4,04,211 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 47,240 ಮಂದಿ ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2,97,99,534ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 4,59,920 ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಮಂಗಳವಾರ ಒಂದೇ ದಿನದಲ್ಲಿ 19,07,216 ಮಂದಿಗೆ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಇಲ್ಲಿಯವರೆಗ 42,33,32,097 ಮಂದಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ. ದೇಶದಲ್ಲಿ ಇಲ್ಲಿಯವರೆಗೆ 36,13,23,548 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.