ನವದೆಹಲಿ, ಜು. 07 (DaijiworldNews/SM): ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆಯಾಗಿ ಶೋಭಾ ಕರಂದ್ಲಾಜೆ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಬುಧವಾರ ಸಂಜೆಯಷ್ಟೇ ಮಂತ್ರಿಯಾಗಿ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದರು. ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾಗೆ ಇದೀಗ ರಾಜ್ಯ ಖಾತೆ ಸಚಿವೆ ಹುದ್ದೆ ನೀಡಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನೂತನ ಸಂಪುಟದ ಮಂತ್ರಿ, ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ.