ಪುಲ್ವಾಮಾ, ಜು 08 (DaijiworldNews/PY): ಜಮ್ಮು-ಕಾಶ್ಮೀರದ ಪುಲ್ವಾಮಾದ ಪುಚಲ್ ಪ್ರದೇಶದಲ್ಲಿ ಭಾರತೀಯ ಸೇನೆ ನಡೆಸಿದ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯ್ಬಾಗೆ ಸೇರಿದ ಐವರು ಉಗ್ರರನ್ನು ಹತ್ಯೆಗೈದಿದ್ದಾರೆ.
ಪ್ರಾತಿನಿಧಿಕ ಚಿತ್ರ
ಮಧ್ಯರಾತ್ರಿ ನಿಷೇಧಿತ ಭಯೋತ್ಪಾದಕ ಸಂಘಟನೆಯ ಐವರು ಭಯೋತ್ಪಾದಕರನ್ನು ಕುಲ್ಗಾಮ್ ಪೊಲೀಸ್ ಹಾಗೂ 1 ಆರ್ಆರ್ ಜಂಟಿ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿದೆ.
"ಭದ್ರತಾ ಪಡೆಗಳ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ" ಎಂದು ಕಾಶ್ಮೀರ ವಲಯ ಪೊಲೀಸರು ಹೇಳಿದ್ದಾರೆ.