ನವದೆಹಲಿ, ಜು 08 (DaijiworldNews/PY): ಭಾರತದಲ್ಲಿ ಕಳೆದ 45,892 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,07,09,557 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 817 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಒಟ್ಟು 4,05,028 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 44,291 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 2,98,43,825 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 4,60,704 ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಲಸಿಕೆ ಅಭಿಯಾನ ಆರಂಭವಾಗಿ ಈವರೆಗೆ ಒಟ್ಟು 36,48,47,549 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.