ಬೆಂಗಳೂರು, ಜು.08 (DaijiworldNews/HR): ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಸೋಮು ನ್ಯಾಮಗೌಡ ಮತ್ತು ವಿನಯ ಕುಲಕರ್ಣಿ
ಬಂಧಿತ ಕೆಎಎಸ್ ಅಧಿಕಾರಿಯನ್ನು ಸೋಮು ನ್ಯಾಮಗೌಡ ಎಂದು ಗುರುತಿಸಲಾಗಿದೆ.
ಸೋಮು ನ್ಯಾಮಗೌಡ ಪ್ರಸ್ತುತ ಗದಗ ಎಪಿಎಂಸಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಗದಗದಲ್ಲಿ ಅವರನ್ನು ಬಂಧಿಸಲಾಗಿದೆ. ವಿನಯ ಕುಲಕರ್ಣಿ ಸಚಿವರಾಗಿದ್ದಾಗ ಸಂದರ್ಭದಲ್ಲಿ ಆಪ್ತ ಕಾರ್ಯದರ್ಶಿಯಾಗಿದ್ದರು.
ಇನ್ನು ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಈಗಾಗಲೇ ಜೈಲು ಸೇರಿದ್ದು, ಸೋಮು ಅವರಿಗೆ ಹತ್ಯೆಯ ಬಗ್ಗೆ ಎಲ್ಲಾ ಮಾಹಿತಿ ಇತ್ತು. ಸೂಕ್ತ ಸಾಕ್ಷ್ಯಾಧಾರ ಸಂಗ್ರಹಿಸಿದ ನಂತರ ಸಿಬಿಐನಿಂದ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.