ಮುಂಬೈ,ಜು 08 (DaijiworldNews/MS): ಬಾಲಿವುಡ್ ನಟಿ ಸನ್ನಿ ಲಿಯೋನ್ ದೇಶದಲ್ಲಿ ಇಂಧನ ಬೆಲೆ ಏರಿಕೆಯ ಬಗ್ಗೆ ಲಘುವಾಗಿ ಟೀಕಿಸಿದ್ದು, "ಪೆಟ್ರೋಲ್ ಅಂತಿಮವಾಗಿ ₹ 100 ದಾಟಿದಾಗ ನೀವು ನಿಮ್ಮ ಆರೋಗ್ಯವನ್ನು ಕಾಪಡಿಕೊಳ್ಳಬೇಕು" ಎಂದು ತಮ್ಮ ಹೊಸ ಸೈಕಲ್ ಪೊಟೋ ಹಂಚಿಕೊಂಡಿದ್ದಾರೆ.
ದೇಶದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಬಹುತೇಕ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ. ಕರ್ನಾಟಕದಲ್ಲೂ ರಾಜ್ಯದಲ್ಲಿ ಪ್ರತಿಪಕ್ಷಗಳು ಬೆಲೆ ಏರಿಕೆ ವಿರುದ್ಧ ಸೈಕಲ್ ಜಾಥಾ ನಡೆಸಿ ಪ್ರತಿಭಟನೆ ನಡೆಸುತ್ತಿದೆ. ಆದರೂ ಪೆಟ್ರೋಲ್ ಬೆಲೆ ಮಾತ್ರ ಕಡಿಮೆಯಾಗಿಲ್ಲ. ಇದರ ಬೆನ್ನಲ್ಲೇ ನಟಿ ಸನ್ನಿ ಲಿಯೋನ್ ಕೂಡ ತೈಲ ಬೆಲೆ ಏರಿಕೆ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿರುವುದು ಸುದ್ದಿಯಾಗಿದೆ.
"ಪೆಟ್ರೋಲ್ ಅಂತಿಮವಾಗಿ ₹ 100 ದಾಟಿದಾಗ ನೀವು ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು" ಸೈಕ್ಲಿಂಗ್ ಹೊಸ ಗ್ಲಾಮ್ ಎಂದು ತಮ್ಮ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಹೊಸ ಸೈಕಲ್ ನ ಪೋಟೋ ದೊಂದಿಗೆ ಸನ್ನಿ ತುಂಬಾ ಮನಮೋಹಕ ನೋಟದಲ್ಲಿ ಕಾಣಿಸಿಕೊಳ್ಳುತ್ತಾನೆ. ಸನ್ನಿ ಕೆಂಪು ಶಾರ್ಟ್ ಡ್ರೆಸ್ ಮತ್ತು ಮ್ಯಾಚಿಂಗ್ ಫೂಟ್ ವೇರ್ ಧರಿಸಿ ಆಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಸನ್ನಿ ಲಿಯೋನ್ ಅವರ ಈ ಪ್ರತಿಕ್ರಿಯೆಯನ್ನು ಅಭಿಮಾನಿಗಳು ಮೆಚ್ಚಿಕೊಂಡು ಪ್ರತಿಕ್ರಿಯಿಸಿದ್ದಾರೆ.
ಇನ್ನೊಂದೆಡೆ ರೈತ ಸಂಘಟನೆಗಳು ಇಂಧನ ಬೆಲೆ ಏರಿಕೆ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಬೇಕೆಂದು ಕರೆ ನೀಡಿವೆ. ಇದಕ್ಕೆ ವಿವಿಧ ಕಾರ್ಮಿಕ ಸಂಘಗಳು ಸಹ ಮುಷ್ಕರಕ್ಕೆ ಬೆಂಬಲ ಘೋಷಿಸಿವೆ.