ನವದೆಹಲಿ, ಜು 08 (DaijiworldNews/PY): ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ನೂತನ ಮಾಹಿತಿ ತಂತ್ರಜ್ಞಾನ ಸಚಿವರಾಗಿ ಅಶ್ವಿನಿ ವೈಷ್ಣವ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಟ್ವಿಟ್ಟರ್ಗೆ ಎಚ್ಚರಿಕೆ ನೀಡಿದ್ದು, "ದೇಶದ ಸವೋಚ್ಛ ಕಾನೂನನ್ನು ಪಾಲಿಸಲೇಬೇಕು" ಎಂದಿದ್ದಾರೆ.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಭಾರತದಲ್ಲಿ ಕಾರ್ಯ ನಿರ್ವಹಿಸುವವರು ಹಾಗೂ ವಾಸಿಸುವವರು ಈ ದೇಶದ ನಿಯಮಗಳನ್ನು ಪಾಲಿಸಲೇಬೇಕಾಗುತ್ತದೆ" ಎಂದು ತಿಳಿಸಿದ್ದಾರೆ.
"ಸಾಮಾಜಿಕ ಮಾಧ್ಯಮ ಕಂಪನಿಗಳು, ದೇಶದಲ್ಲಿ ಜಾರಿಗೊಳಿಸಿರುವ ಹೊಸ ಮಾಹಿತಿ ತಂತ್ರಜ್ಞಾನ ಕಾಯ್ದೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಈಟಿ ಕಾಯ್ದೆಯನ್ನು ಅನುಸರಿಸದಿದ್ದಲ್ಲಿ ಐಟಿ ನಿಯಮಗಳ ಉಲ್ಲಂಘನೆ ಮಾಡಿದಂತಾಗುತ್ತದೆ. ಇದರ ಪರಿಣಾಮ ಐಟಿ ಕಾಯ್ದೆ 2000, ಸೆಕ್ಷನ್ 79(01)ರ ಅನ್ವಯ ಕಾನೂನು ರಕ್ಷಣೆ ಕಳೆದುಕೊಳ್ಳಲಿದೆ" ಎಂದಿದ್ದಾರೆ.