ಬೆಂಗಳೂರು, ಜು. 08 (DaijiworldNews/SM): ಕೋವಿಡ್-19 ಸೋಂಕು ಹರಡದಂತೆ ಎಚ್ಚರಿಕೆ ವಹಿಸದೇ ಇದ್ದಲ್ಲಿ ಪ್ರಸ್ತುತ 15 ದಿನ ಕೊಟ್ಟಿರುವ ಅನ್ಲಾಕ್ ಪ್ರಕ್ರಿಯೆ ತೆರವುಗೊಳಿಸಬೇಕಾಗಬಹುದು. ಹಾಗೂ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡಬೇಕಾದ ಅನಿವಾರ್ಯತೆ ಸೃಷ್ಠಿಯಾಗಬಹುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಂಕು ನಿಯಂತ್ರಣದ ನಿಟ್ಟಿನಲ್ಲಿ ಜನರು ಎಚ್ಚರಿಕೆಯಿಂದ ಇರಬೇಕಾಗಿದ್ದು, ಮತ್ತೊಮ್ಮೆ ಲಾಕ್ ಡೌನ್ ಗೆ ಅವಕಾಶ ಕೊಡದೆ ಸೋಂಕು ತಡೆಗೆ ಸಾರ್ವಜನಿಕರು ಸಹಕರಿಸಬೇಕು ಎಂಬುವುದಾಗಿ ಸಿಎಂ ಯಡಿಯೂರಪ್ಪ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.